ಕುಂದಾಪುರ : 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಕಟ್ಕೇರೆ ಎಂಬಲ್ಲಿ ನಡೆದಿದೆ.
ಕಟ್ಕೇರೆ ನಿವಾಸಿ ರಾಜಶೇಖರ್ ಎಂಬುವರ ಪುತ್ರಿ ರಿಷಿಕ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಸೆಪ್ಟಂಬರ್ ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ರಿಷಿಕ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಸಂಜೆ ಶಾಲೆಯಿಂದ ಮನೆಗೆ ಬಂದವಳು ಬಾವಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕುಂದಾಪುರದ ಅಗ್ನಿಶಾಮಕ ದಳದವರು ಮೃತದೇಹವನ್ನು ಮೇಲೆಕ್ಕೆತ್ತಿದ್ದು, ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.