ಗೃಹಲಕ್ಷ್ಮಿ ಯೋಜನೆ ಸಮಸ್ಯೆ ನಿವಾರಣೆಗೆ ಇಂದಿನಿಂದ 3ದಿನ ವಿಶೇಷ ಶಿಬಿರ, ನಿಮ್ಮ ಗ್ರಾ.ಪಂಚಾಯತಿಗೆ ಭೇಟಿ ನೀಡಿ

ಬೆಂಗಳೂರು : ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಆಯೋಜಿಸಲಾಗಿದೆ.

ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಇದೇ 27ರಿಂದ 29ರ ವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು, ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ಗ್ರಾಮ ಪಂಚಾಯತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅದರಂತೆ, 27.12.2023 ರಿಂದ 29.12.2023 ರವರೆಗೆ ಕ್ಯಾಂಪ್‌ ಆಯೋಜಿಸಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ಮೂರು ದಿನ ಬೆಳಿಗ್ಗೆ 9 ರಿಂದ ಸಂಜೆ 5ರ ವರೆಗೆ ನಡೆಯುವ ಈ ಶಿಬಿರದಲ್ಲಿ ಸುಮಾರು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ, ಫಲಾನುಭವಿಗಳ ಬ್ಯಾಂಕ್ ಖಾತೆ ಸಮಸ್ಯೆ, ಹಣ ಜಮೆಗೆ ಸಂಬಂಧಿಸಿದಂತೆ ಈ ಯೋಜನೆಯ ಲಾಭ ಪಡೆದುಕೊಳ್ಳಲು ಫಲಾನುಭವಿಗಳಿಗೆ ಕೆಲ ತೊಂದರೆಗಳು ಆಗುತ್ತಿರುವುದು ಕಂಡುಬಂದಿದೆ. ಹೀಗಾಗಿ ಈ ಕ್ಯಾಂಪ್ನಲ್ಲಿ ಎಲ್ಲಾ ಸಮಸ್ಯೆ ಪರಿಹರಿಸಲಾಗುತ್ತದೆ.

You cannot copy content from Baravanige News

Scroll to Top