ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ : LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ : ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ.


ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು.

ಇನ್ನು ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ ಈಗ 1,924.50 ರೂ. ಆಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಹದಿನೈದು ದಿನಗಳಿಗೊಮ್ಮೆ ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಣೆ ಮಾಡುತ್ತವೆ.

Scroll to Top