ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ – ಯುವಕ ಮೃತ್ಯು : ತಾಯಿಗೆ ಗಂಭೀರ ಗಾಯ

ಉಡುಪಿ : ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.

ಮೃತರನ್ನು ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಅಝೀಝ್ ಎಂಬವರ ಪುತ್ರ ಮುಫ್ರೀನ್(18) ಎಂದು ಗುರುತಿಸಲಾಗಿದೆ.

ಸಹಸವಾರೆಯಾಗಿದ್ದ ಮೃತರ ತಾಯಿ ಹಾಜಿರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಫ್ರೀನ್ ತನ್ನ ತಾಯಿಯನ್ನು ಹೈಟೆಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದ್ವಿಚಕ್ರ ವಾಹನವೊಂದರಲ್ಲಿ ಕರೆದೊಯ್ಯುತ್ತಿದ್ದ ವೇಳೆ ಉದ್ಯಾವರ ಹಲೀಮಾ ಸಾಬ್ಜು ಆಡಿಟೋರಿಯಂ ಮುಂದೆ ನಿಲ್ಲಿಸಲಾಗಿದ್ದ ಬೊಲೆರೋ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮುಫ್ರೀನ್ ಗಂಭೀರ ಗಾಯಗೊಂಡಿದ್ದು, ಆತನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಆತನ ತಾಯಿ ಹಾಜಿರಾ ಭಾನು ಗಂಭೀರ ಗಾಯಗೊಂಡಿದ್ದು, ಅವರನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತಲೆಯ ಭಾಗಕ್ಕೆ ಗಾಯವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

Baravanige News

Translate »

You cannot copy content from Baravanige News

Scroll to Top