ಕೊಹ್ಲಿ ಬಗ್ಗೆ ಕೀಳಾಗಿ ಮಾತನಾಡಿದ ಸ್ನೇಹಿತನನ್ನೇ ಕೊಂದ RCB ಅಭಿಮಾನಿ!

ಚೆನ್ನೈ: RCB ಮತ್ತು ವಿರಾಟ್‌ ಕೊಹ್ಲಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಪಿ. ವಿಘ್ನೇಶ್ (24) ಎಂದು ಗುರುತಿಸಲಾಗಿದೆ. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಮಾಡಿರುವ ಯುವಕ ವಿರಾಟ್ ಕೊಹ್ಲಿ ಅಭಿಮಾನಿಯಾದರೆ, ಸಾವಿಗೀಡಾದವ ರೋಹಿತ್‌ ಶರ್ಮಾ ಅಭಿಮಾನಿ. ಆರೋಪಿ ಯುವಕ ಎಸ್.ಧರ್ಮರಾಜ್(21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ಪಟ ಕ್ರಿಕೆಟ್ ಅಭಿಮಾನಿಗಳಾಗಿದ್ದ ಇಬ್ಬರೂ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ, ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಆಟಗಾರ ಎಂಬ ಬಗ್ಗೆ ಚರ್ಚೆ ನಡೆಸಿ ಗಲಾಟೆ ಮಾಡಿಕೊಂಡಿದ್ದರು. ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ವಿಘ್ನೇಶ್ ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್, ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಜತೆಗೆ ಬ್ಯಾಟ್‌ನಿಂದ ತಲೆಗೆ ಹೊಡೆದಿದ್ದಾನೆ. ಘಟನೆ ಬಳಿಕ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

You cannot copy content from Baravanige News

Scroll to Top