ನಾಪತ್ತೆಯಾಗಿದ್ದ ಕರಣ್ ಸಾಲ್ಯಾನ್ ಮೃತದೇಹ ಪತ್ತೆ

ಉಡುಪಿ : ಕಾಪು ಕಡಲ ತೀರದಲ್ಲಿ ಬೈಕ್ ಹಾಗೂ ಮೊಬೈಲ್ ಇಟ್ಟು ನಾಪತ್ತೆಯಾಗಿದ್ದ ಯುವಕ ಕರಣ್ ಸಾಲ್ಯಾನ್ ಮೃತದೇಹ ಕಡೆಕಾರು- ಪಡುಕೆರೆ ಬಳಿಯ ಸಮುದ್ರದಲ್ಲಿ ಶುಕ್ರವಾರ ಸಂಜೆ ವೇಳೆ ಪತ್ತೆಯಾಗಿದೆ.

ಗುರುವಾರ ಸಂಜೆಯಿಂದ ಮನೆಯಿಂದ ನಾಪತ್ತೆ ಆಗಿದ್ದ ಕರಣ್ ಸಾಲ್ಯಾನ್ ಅವರ ಬೈಕ್, ಮೊಬೈಲ್ ಹಾಗೂ ಪರ್ಸ್ ಕಾಪು ಲೈಟ್ ಹೌಸ್ ಬಳಿಯ ಶ್ರೀಯಾನ್ ಸದನ ಮನೆಯ ಬಳಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿತ್ತು. ಕಾಣೆಯಾದ ಬಗ್ಗೆ ತುಳಸಿ ಸಾಲ್ಯಾನ್‌ರವರು ಕಾಪು ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು.

ಶುಕ್ರವಾರ ಸಂಜೆಯ ವೇಳೆ ಮಲ್ಪೆ ಬಳಿಯ ಪಡುಕೆರೆ ಕಡೆಕಾರು ಸಮುದ್ರದಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳೀಯರು ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಕರಣ್ ಕುಟುಂಬಿಕರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹದ ಗುರುತು ಪತ್ತೆ ಮಾಡಿದ್ದಾರೆ. ಈ ವೇಳೆ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top