ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಉಡುಪಿ: ಮಾಜಿ ಶಾಸಕ ಕೆ.ರಘುಪತಿ ಭಟ್ ಪತ್ನಿ ಪದ್ಮಪ್ರಿಯ ಆತ್ಮಹತ್ಯೆ ಪ್ರಕರಣ: ಆರೋಪಿ ಅತುಲ್ ಖುಲಾಸೆ

ಉಡುಪಿ, ಜೂ 13: 15 ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೋಸ, ವಂಚನೆ ಹಾಗೂ ನಕಲಿ ದಾಖಲೆ ಸೃಷ್ಠಿಸಿರುವ ಪ್ರಕರಣದ ಆರೋಪಿ ಅತುಲ್ ‌ರಾವ್ ನನ್ನು ಉಡುಪಿ ಜಿಲ್ಲಾ ಎರಡನೇ ಹೆಚ್ಚವರಿ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ಆದೇಶ ನೀಡಿದೆ.

2008ರ ಜೂ.10ರಂದು ಪದ್ಮಪ್ರಿಯ ಕರಂಬಳ್ಳಿಯ ತನ್ನ ಮನೆಯಿಂದ ನಾಪತ್ತೆಯಾಗಿದ್ದರು. ಅಂದು ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ, ಅದೇ ಊರಿನ ಅತುಲ್ ರಾವ್‌, ಮನೆಯಿಂದ ಪದ್ಮಪ್ರಿಯ ಅವರನ್ನು ಆಕೆಯ ಕಾರಿನಲ್ಲಿ ಕರೆದು ಕೊಂಡು ಹೋಗಿ ಕುಂಜಾರುಗಿರಿಯ ದಾರಿ ಮಧ್ಯೆ ಕಾರನ್ನು ಇಟ್ಟು, ಅದರ ಒಳಗೆ ಬಳೆಯ ಚೂರು, ರಕ್ತದ ಕಲೆಗಳನ್ನು ಮಾಡಿ ಅಪಹರಣದ ನಾಟಕ ಮಾಡಿದ್ದರೆಂದು ದೂರಲಾಗಿತ್ತು. ಈ ಬಗ್ಗೆ 2008ರ ಜೂ.19ರಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಉಡುಪಿ ಸಿಜೆಎಂ ನ್ಯಾಯಾಲಯವು 2023ರ ನ.10ರಂದು ಆರೋಪಿ ಅತುಲ್ ರಾವ್ ಗೆ ಒಂದು ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿತು. ಇದರ ವಿರುದ್ಧ ಅತುಲ್ ಡಿಸೆಂಬರ್ ತಿಂಗಳಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ದಿನೇಶ್ ಹೆಗ್ಡೆ, ಆರೋಪಿ ಅತುಲ್ ನನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್ ಬಂಗೇರ ಹಾಗೂ ಸ್ಟೀವನ್ ಲೂಯಿಸ್ ವಾದ ಮಂಡಿಸಿದ್ದರು.

Related Posts

Scroll to Top