ಮಂಗಳೂರು: ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದಾರೆ.
ಉಜಿರೆ ನಿವಾಸಿ ಪ್ರಜ್ವಲ್ ನಾಯಕ್ ಮೃತ ದುರ್ದೈವಿ. ಅಪಘಾತದ ತೀವ್ರತೆಗೆ ಐಷಾರಾಮಿ ಬೆಂಜ್ ಕಾರು ನಜ್ಜುಗುಜ್ಜಾಗಿದೆ. ಡಿವೈಡರ್ ಮೇಲೇರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದೆ.
ಇಂದು ನಸುಕಿನ ಜಾವದಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದರು ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಸ್ತೆ ಡಿವೈಡರ್ ಮೇಲೇರಿ ಪಲ್ಟಿ ಹೊಡೆದ ಐಷಾರಾಮಿ ಕಾರು.. ಅಪಘಾತ ತೀವ್ರತೆಗೆ ಕಾರು ಚಾಲಕ ಸಾವು
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »