ಭಾರೀ ಮಳೆ ಹಿನ್ನೆಲೆ; ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ಜು.6 ರಂದು ರಜೆ ಘೋಷಣೆ

ಉಡುಪಿ,ಜು 04: ಭಾರೀ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮೋ ,ಇಂಜಿನಿಯರಿಂಗ್ , ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top