ಪ್ರತಿಷ್ಠಿತ ಕಾಲೇಜಿನ ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ!

ಮಣಿಪಾಲ : ಹೆರ್ಗದಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.

ಶ್ರೀನಿಧಿ ಶೆಟ್ಟಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಶ್ರೀನಿಧಿ ತಂದೆ ಕೊಪ್ಪ ಹರಂದೂರು ಗ್ರಾಮದ ಮಹೇಶ್ ಎನ್ನುವವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ಪತ್ನಿ ಹಾಗೂ ಮಗಳೊಂದಿಗೆ ಮಹೇಶ್ ವಾಸವಾಗಿದ್ದರು. ಬಾಡಿಗೆ ಮನೆಯ ರೂಮ್ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top