ಕನ್ನಡ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ. ಇವರು ಅತ್ಯಂತ ಕಿರಿಯ ವಯಸ್ಸಿಗೆ ತಮ್ಮ ಜೀವ ಕಳೆದುಕೊಂಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಅಪರ್ಣಾ 1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ಸೇರಿದ್ರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದಾರೆ

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top