ರಾಷ್ಟ್ರರಾಜಕಾರಣಕ್ಕೆ ಹೋಗಿರುವ ಕೋಟಾ ಶ್ರೀನಿವಾಸ್ ಪೂಜಾರಿಗೆ ಸಿಕ್ತು ಮಹತ್ವದ ಹುದ್ದೆ

ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಶಿವಶಕ್ತಿನಾಥ್ ಭಕ್ಷಿ ಅವರು ಆದೇಶ ಹೊರಡಿಸಿದ್ದಾರೆ. 

ಡಾ ಸಂಜಯ್ ಜೈಸ್ವಾಲ್ ಅವರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಿದ್ದರೆ, ಇನ್ನುಳಿದ 16 ಜನರನ್ನು ಸಚೇತಕರನ್ನಾಗಿ ನೇಮಿಸಲಾಗಿದೆ. ಇನ್ನು ಈ 16 ಜನರ ಸಚೇತಕರ ಪೈಕಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಸ್ಥಾನ ಸಿಕ್ಕಿದೆ. ಈ ಮೂಲಕ ಕೋಟ ಶ್ರೀನಿವಾಸ್ ಪೂಜಾರಿ ಅವರು ರಾಷ್ಟ್ರ ರಾಜಕಾರಣದಲ್ಲಿ ಮತ್ತೊಂದು ಹಂತದ ಮೇಲಕ್ಕೆ ಹೋಗಿದ್ದಾರೆ.

ತಮ್ಮನ್ನು ಸಚೇತಕರನ್ನಾಗಿ ನೇಮಕ ಮಾಡಿದ ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಗೆ ಕೋಟಾ ಶ್ರೀನಿವಾಸ್ ಪೂಜಾರಿ ಧನ್ಯವಾದ ತಿಳಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿಯ ಸಂಸದೀಯ ಮಂಡಳಿಯು ನನ್ನನ್ನು ಲೋಕಸಭಾ ಸಚೇತಕ ಹುದ್ದೆಗೆ ಪರಿಗಣಿಸಿ ಆಯ್ಕೆ ಮಾಡಿರುವುದಕ್ಕೆ ಪ್ರಧಾನಿನರೇಂದ್ರ ಮೋದಿಯವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರಿಗೆ ಹಾಗೂ ಪಕ್ಷದ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಈ ಹಿಂದೆ ವಿಧಾನಪರಿಷತ್ಗೆ ಆಯ್ಕೆಯಾಗಿ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಿತ್ತು. ಅದರಂತೆ ಕೋಟ ಶ್ರೀನಿವಾಸ್ ಪೂಜಾರಿ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಅವರನ್ನು ಪಕ್ಷದ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇತರೆ ನಾಯಕರು ಅಭಿನಂದನೆ ತಿಳಿಸಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top