ಶಿರಾಡಿ ಘಾಟ್ ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.
ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

ವಾಹನ ಸಂಚಾರ ಸಂಪೂರ್ಣ ಬಂದ್

ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.

Baravanige News

Adblock Detected!

Our website is made possible by displaying online advertisements to our visitors. Please consider supporting us by whitelisting our website.

You cannot copy content from Baravanige News

Scroll to Top