ಪಾಂಗಾಳ : ಸ್ಕೂಟಿ-ಬೈಕ್‌ ಢಿಕ್ಕಿ ; ಗಾಯ

ಕಾಪು : ಸ್ಕೂಟಿಗೆ ಬೈಕ್‌ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಬೈಕ್‌ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ ಸವಾರರಾದ ಮಂಗಳೂರಿನ ವಿಕಾಸ್‌ ಮತ್ತು ಸಾನು ಹಾಗೂ ಸ್ಕೂಟಿಯಲ್ಲಿದ್ದ ಕೈಪುಂಜಾಲಿನ ಶೋಭಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಕೂಟಿಯಲ್ಲಿದ್ದ ಶೋಭಾ ಅವರ ಪತಿ ಸ್ಯಾಮುವೆಲ್‌ ಮತ್ತು ಅವರ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Baravanige News

Translate »

You cannot copy content from Baravanige News

Scroll to Top