ಕಾರ್ಕಳ: ಅನಾರೋಗ್ಯದಿಂದ ಬೇಸತ್ತ ಯುವಕನೋರ್ವ ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಡಾರುವಿನಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಹರಿಪ್ರಸಾದ್(30)ಎಂಬವರು ಮೃತಪಟ್ಟವರು. ಕಳೆದ ಎರಡು ವರ್ಷದಿಂದ ಕಾಲು ನೋವಿನಿಂದ ಬಳಲುತಿದ್ದರು. ಉಡುಪಿ ಜಿಲ್ಲಾಸ್ಪತ್ರೆ ಹಾಗೂ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಜು.20ರಂದು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರಾದರೂ ಕಾಲು ನೋವು ಗುಣವಾಗಲಿಲ್ಲ. ಈ ಹಿನ್ನಲೆಯಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಮನೆಯ ಎದುರಿನ ಬಾವಿಗೆ ಹಾರಿದ್ದಾರೆ ಎಂದು ವರದಿ ತಿಳಿಸಿದೆ.
ಸದ್ಯ ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.