ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಭೀಕರ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು

ಉಡುಪಿ, (ಸೆಪ್ಟೆಂಬರ್ 30): ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್​ಗೆ ಲಾರಿ ಡಿಕ್ಕಿಯಾಗಿದೆ.

ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top