ಪ್ರತಿಭಾ ಕುಳಾಯಿ ವಿರುದ್ದ ಮಾನಹಾನಿಕಾರ ಪೋಸ್ಟ್ – ಆರೋಪಿ ಪೊಲೀಸ್ ಕಸ್ಟಡಿಗೆ

ಮಂಗಳೂರು, ಅ 28 : ಕಾಂಗ್ರೆಸ್‌ ಮಾಜಿ ಕಾರ್ಪೋರೇಟರ್‌ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕಾರಕ ಪೋಸ್ಟ್ ಹಾಕಿದ್ದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಕೆ. ಆರ್. ಶೆಟ್ಟಿ ಅಡ್ಯಾರ್ ಪದವು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಸುರತ್ಕಲ್‌ನಲ್ಲಿರುವ ಟೋಲ್‌ಗೇಟ್‌ನಲ್ಲಿ ಅಕ್ರಮವಾಗಿ ಟೋಲ್‌ ವಸೂಲಿ ಮಾಡಲಾಗುತ್ತಿದೆ. ಟೋಲ್‌ಗೇಟ್‌ ಅನ್ನು ತೆರವುಗೊಳಿಸಬೇಕೆಂದು ಅಕ್ಟೋಬರ್ 18ರಂದು ಬೃಹತ್ ಹೋರಾಟ ನಡೆದಿತ್ತು. ಈ ವೇಳೆ, ಸೂರತ್ಕಲ್ ಟೋಲ್‌ಗೇಟ್‌ ವಿರೋಧಿ ಹೋರಾಟ ಸಮಿತಿ ಸದಸ್ಯರೂ ಆದ ಪ್ರತಿಭಾ ಕುಳಾಯಿ ವಿರುದ್ಧ ಹೋರಾಟದ ದೃಶ್ಯಾವಳಿ ಬಳಸಿ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಪೋಸ್ಟ್ ಮಾಡಿರುವ ಆರೋಪ ಇವರ ಮೇಲಿದೆ.ವಕೀಲರ ಮೂಲಕ ಕೋರ್ಟ್ ಗೆ ಹಾಜರಾಗಿದ್ದ ಆತನನ್ನು ನ್ಯಾಯಾಲಯ ಒಂದು ದಿನದ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಕೆ. ಆರ್. ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಗೆ ಮತ್ತೋರ್ವ ಆರೋಪಿ ಶ್ಯಾಮ ಸುದರ್ಶನ ಭಟ್ ಹೊಸಮೂಲೆ ಅಶ್ಲೀಲ ಕಮೆಂಟ್ ಹಾಕಿದ್ದು, ಸದ್ಯ ತಲೆಮರೆಸಿಕೊಂಡಿದ್ದಾನೆ.ಮಾನಹಾನಿಕಾರಕ ಪೋಸ್ಟ್ ವಿರುದ್ದ ಪ್ರತಿಭಾ ಕುಳಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದರು. ಈ ಬೆನ್ನಲ್ಲೇ, ಆರೋಪಿ ಕೆ. ಆರ್. ಶೆಟ್ಟಿ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಪೊಲೀಸರು ಆತನನ್ನು ಕಸ್ಟಡಿಗೆ ಪಡೆದಿದ್ದಾರೆ.

You cannot copy content from Baravanige News

Scroll to Top