ಚಿಕ್ಕೋಡಿ: ಶ್ರೀ ರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ.
ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ. ಬೋ…ಮಗನೇ ಎಂದೆಲ್ಲಾ ಹೀನಾಯವಾಗಿ ಬೈದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಈಗಾಗಲೇ ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪ್ರಮೋದ್ ಮುತಾಲಿಕ್, ನನಗೆ ಜೀವ ಬೆದರಿಕೆಗಳು ಬರುತ್ತಿವೆ. ಬೇರೆ ಬೇರೆ ನಂಬರ್ ನಿಂದ ಕರೆ ಮಾಡಿ, ಜೀವ ಬೆದರಿಕೆ ಕರೆಗಳು ಬರುತ್ತಿವೆ.
ತುಂಡು ತುಂಡು ಮಾಡಿ ಬಿಸಾಕಿತ್ತೇವೆ. ಬೋ…ಮಗನೆ ಅಂತೆಲ್ಲ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ. ನನಗೆ 4-5 ನಂಬರ್ ನಿಂದ ಕರೆಗಳು ಬರುತ್ತಿವೆ ಎಂದು ಹೇಳಿರುವ ಪ್ರಮೋದ್ ಮುತಾಲಿಕ್ ಈ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ದೂರು ನೀಡಿದ್ದೇನೆ ಅಂದಿದ್ದಾರೆ.
ಉರ್ದು ಮಿಶ್ರಿತ ಮಂಗಳೂರು ಕನ್ನಡದಲ್ಲಿ ನನಗೆ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಕರೆ ಬಂದ ಎಲ್ಲಾ ನಂಬರ್ ಗಳನ್ನು ನಾನು ಹುಕ್ಕೇರಿ ಪೊಲೀಸರಿಗೆ ನೀಡಿದ್ದೇನೆ.
ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇನೆ ಎಂದಿದ್ದಾರೆ.