ಕುಂದಾಪುರ: ಲಾರಿ ಡಿಕ್ಕಿ; ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ

ಕುಂದಾಪುರ(ಮಾ.16): ಡಿಪೋದಿಂದ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ಸರ್ಕಾರಿ ಬಸ್ಸೊಂದು ಯೂ ಟರ್ನ್ ತೆಗೆದುಕೊಳ್ಳುವ ವೇಳೆ‌ ಲಾರಿ‌ ಡಿಕ್ಕಿಯಾದ ಪರಿಣಾಮ ಪಲ್ಡಿಯಾದ ಘಟನೆ‌ ಗುರುವಾರ‌ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರದ ಸಂತೆ ಮಾರ್ಕೆಟ್ ಬಳಿ ನಡೆದಿದೆ.

ಗುರುವಾರ ಬೆಳಿಗ್ಗೆ ಎಂದಿನಂತೆ ಕೆಎಸ್ಆರ್ಟಿಸಿ ಬಸ್ಸು ಸರ್ವೀಸ್ ರಸ್ತೆಯಲ್ಲಿ‌ ಬಂದು ಸಂತೆ ಮಾರ್ಕೆಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯು ಟರ್ನ್ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭ ಹಿಂದಿನಿಂದ ಬಂದ ಲಾರಿ‌ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಪ್ರಯಾಣಿಕರಿಲ್ಲದ ಬಸ್ ತಿರುವು ತೆಗೆದುಕೊಳ್ಳುತ್ತಿದ್ದುದರಿಂದ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬರಬೇಕಾದರೆ ನಿತ್ಯವೂ ಸರ್ಕಾರಿ ಬಸ್ ಗಳು ಸರ್ಕಸ್‌ ಮಾಡಬೇಕಾದ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Scroll to Top