ಶ್ರವಣಬೆಳಗೊಳದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಹಾಸನ, ಮಾ.23: ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನ ಮಠದ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ವಿಧಿವಶರಾಗಿದ್ದಾರೆ. ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರನ್ನು ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಉಸಿರು ಚೆಲ್ಲಿದ್ದಾರೆ.

ಕಳೆದ 4 ತಿಂಗಳಿನಿಂದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಆರೋಗ್ಯ ವಿಚಾರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೂಡ ಶ್ರವಣಬೆಳಗೊಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದರು. ಆದರೆ ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸ್ವಾಮೀಜಿಗಳು ದೈವಾಧೀನರಾಗಿದ್ದಾರೆ.

ಸ್ವಸ್ತಿಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಇಹಲೋಕ ತ್ಯಜಿಸಿದ ವಿಚಾರಕ್ಕೆ ಅನೇಖಕ ಭಕ್ತರು ಕಂಬನಿ ಸುರಿಸಿದ್ದಾರೆ. ರಾಜಕೀಯ ನಾಯಕರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

Scroll to Top