ಮಂಗಳೂರು, ಆ.1: ಮುಂದಿನ 4-5 ದಿನಗಳವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ ಕರಾವಳಿ ಭಾಗವಾದ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದ ಭಾಗದಲ್ಲಿ ಆ.2 ರಿಂದ ಮುಂದಿನ 4-5 ದಿನಗಳವರೆಗೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಹಾಗೂ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.