(ಎ.22) ಕುತ್ಯಾರು : ನೇತ್ರ ತಪಾಸಣಾ ಶಿಬಿರ, ಯಕ್ಷಗಾನ, ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣೆ ಕಾರ್ಯಕ್ರಮ

ಕುತ್ಯಾರು : ಕೇಂಜ ಅಬ್ಬೆಟ್ಟುಗುತ್ತು ಸಾಯಿನಾಥ ಶೆಟ್ಟಿ ಸಾರಥ್ಯದಲ್ಲಿ ನೇತ್ರ ತಪಾಸಣಾ ಶಿಬಿರ, ಯಕ್ಷಗಾನ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣೆ ಕಾರ್ಯಕ್ರಮ ಎ.22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಕುತ್ಯಾರು ವಿದ್ಯಾದಾಯಿನಿ ಶಾಲಾ ಮೈದಾನದಲ್ಲಿ ನಡೆಯಲಿದೆ.

ಡಾ. ಕೃಷ್ಣ ಪ್ರಸಾದ್, ಪ್ರಸಾದ್ ನೇತ್ರಾಲಯ ಉಡುಪಿ ಇವರ ನೇತೃತ್ವದಲ್ಲಿ ಉಚಿತ ಕಣ್ಣು ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ( ಅವಶ್ಯಕತೆ ಉಳ್ಳವರಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು )

ಸಂಜೆ 6 ರಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ಮೂಲ್ಕಿ ಇವರಿಂದ ರವಿಕುಮಾರ್ ಸುರತ್ಕಲ್ ವಿರಚಿತ, ಮಾಧವ ಭಂಡಾರಿ ಪದ್ಯ ರಚನೆಯ ‘ಭಂಡಾರ ಚಾವಡಿ’ ತುಳು ಯಕ್ಷಗಾನ ಮೂಡಿ ಬರಲಿದೆ.

ಸಿ. ಎ. ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ದೀಕ್ಷಾ ಶೆಣೈ, ಅಂತರ್ರಾಷ್ಟ್ರೀಯ ಇಂಡೋ ನೇಪಾಳ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ವಿಜೇತರಾದ ಧನ್ಯಶ್ರೀ ಶೆಟ್ಟಿ, ಶಮಿತಾ ಪೂಜಾರಿ, ಸಾಯಿರಶ್ಮಿ ರವರಿಗೆ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.

ರಾತ್ರಿ 8.30 ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You cannot copy content from Baravanige News

Scroll to Top