ಪಿಯುಸಿ ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು, ಏ.21: 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪಿಯು ಮಂಡಳಿ ನಿರ್ದೇಶಕರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. https://karresults.nic.in ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಫಲಿತಾಂಶ ವೀಕ್ಷಿಸಬಹುದು.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಮಾ.9ರಿಂದ 29ರವರೆಗೆ ರಾಜ್ಯದ 1,109 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಒಟ್ಟು 7,27,387 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು.

You cannot copy content from Baravanige News

Scroll to Top