ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.

ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

ಈ ಬಗ್ಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತ್ತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದಿದ್ದಾರೆ.

‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೋದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತ್ತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್‌ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

You cannot copy content from Baravanige News

Scroll to Top