‘ಅಮೃತವರ್ಷಿಣಿ’ ಸಿನಿಮಾ ನಟ ಶರತ್ ಬಾಬು ಇನ್ನಿಲ್ಲ

ಬೆಂಗಳೂರು, ಮೇ.3: ಹಿರಿಯ ನಟ ಶರತ್ ಬಾಬು (72) ನಿಧನರಾಗಿದ್ದಾರೆ.

ಶರತ್ ಬಾಬು ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹೈದರಾಬಾದ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇತ್ತೀಚಿಗೆ ನಟ ದಿಢೀರ್ ಅಸ್ವಸ್ಥರಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಳಿಕ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್‍ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟನಿಗೆ ಉಸಿರಾಡಲು ಕಷ್ಟವಾಗಿತ್ತು. ಹೀಗಾಗಿ ವೆಂಟಿಲೇಟರ್ ನಲ್ಲಿ ಇಡಲಾಗಿತ್ತು.

ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಅವರು ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು. ಹಲವು ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ಚಿರಪರಿಚಿತರಾಗಿದ್ದರು.

Baravanige News

Translate »

You cannot copy content from Baravanige News

Scroll to Top