ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್..!!!

ಪುತ್ತೂರು : ಬುಧವಾರ ನಡೆಯಲಿರುವ ಚುನಾವಣೆ ಹಿನ್ನೆಲೆ ಇಂದು ಸಂಜೆಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ.

8, 9, 10 ನೇ ದಿನಗಳಲ್ಲದೆ ಚುನಾವಣೆ ಫಲಿತಾಂಶ ದಿನವಾದ ಮೇ 13 ರಂದು ಕೂಡಾ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ.

ನಾಲ್ಕು ದಿನಗಳ ಮದ್ಯ ದಾಸ್ತಾನಿಗೂ ಕಡಿವಾಣ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ.

ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.

You cannot copy content from Baravanige News

Scroll to Top