ಮುಸ್ಲಿಂ ಮೀಸಲಾತಿ; ರಾಜಕೀಯ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿ

ನವದೆಹಲಿ, ಮೇ 09: ಕರ್ನಾಟಕ ಸರ್ಕಾರ ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನು ರದ್ದುಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀ ಕೋರ್ಟ್ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ.

ನ್ಯಾಯಾಮೂರ್ತಿಗಳಾದ ಕೆ.ಎಂ ಜೋಸೆಫ್ ಹಾಗೂ ಬಿ.ವಿ ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದು , ಮುಂದಿನ ವಿಚಾರಣೆ ಮೇ 25ಕ್ಕೆ ಮುಂದೂಡಲಾಯಿತು.

ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್‌ ಶಾ ಮತ್ತಿತರರು ನೀಡುತ್ತಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್‌ ಕೆಂಡಾಮಂಡಲವಾಗಿದ್ದು ಪ್ರಕರಣ ನ್ಯಾಯಾಲಯದ ಮುಂದಿರುವಾಗ ಹೇಳಿಕೆಗಳನ್ನು ನೀಡಿದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

Scroll to Top