ಮಂಗಳೂರು, ಮೇ.12: ನಗರದ ಪುರಾಣ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದ ಮೂವರು ದೇವಾಲಯದ ಆವರಣ ಪ್ರವೇಶಿಸಿದ್ದಾರೆ.
ಈ ವೇಳೆ ಅನುಮಾನಗೊಂಡ ಸ್ಥಳೀಯರು ಮೂವರನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ ಹಾಗೂ ಫಾರೂಕ್ನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.
ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು, ಮೂವರನ್ನು ಕದ್ರಿ ಠಾಣೆಗೆ ಕರೆದೊಯ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಹಿಂದೆ ಶಂಕಿತ ಉಗ್ರ ಶಾರೀಕ್ ಕದ್ರಿ ದೇವಾಲಯವನ್ನು ಟಾರ್ಗೆಟ್ ಮಾಡಿದ್ದ. ಅಲ್ಲದೇ ಕದ್ರಿ ದೇವಾಲಯ ಆವರಣದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿ ಭಯದ ವಾತಾವರಣ ಸೃಷ್ಟಿಸಿದ್ದನು.