ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಜಾರಿ – ಕೊಟ್ಟ ಮಾತು ಉಳಿಸಿಕೊಳ್ತೀವಿ: ಡಿಕೆಶಿ

ಬೆಂಗಳೂರು: ಮೊದಲ ಕ್ಯಾಬಿನೆಟ್‌ನಲ್ಲಿಯೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತೇವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಶನಿವಾರದಿಂದ ಜನರ ಆಡಳಿತ, ಜನರ ಧ್ವನಿ ಸರ್ಕಾರ ರಚನೆ ಆಗುತ್ತಿದೆ. ರಾಜ್ಯದ ಜನತೆಗೆ, ಕಾರ್ಯಕರ್ತರು, ಮುಖಂಡರಿಗೆ, ಬೆಂಬಲ ಕೊಟ್ಟವರಿಗೆ ಇದಕ್ಕಾಗಿ ಧನ್ಯವಾದ ಹೇಳುತ್ತೇನೆ ಎಂದರು.

ಪ್ರಮಾಣವಚನ ಕಾರ್ಯಕ್ರಮಕ್ಕೆ ರಾಷ್ಟ್ರದ ಅನೇಕ ನಾಯಕರು ಬರುತ್ತಿದ್ದಾರೆ. ಕಾರ್ಯಕರ್ತರು ವಾಹನ ಮಾಡಿಕೊಂಡು ಬರಬೇಕು. ಜೆಡಿಎಸ್, ಬಿಜೆಪಿ ನಾಯಕರೂ ಬರಬೇಕು. ಎಲ್ಲರೂ 11 ಗಂಟೆ ಒಳಗಡೆ ಕಂಠೀರವ ಕ್ರೀಡಾಂಗಣದ ಬಳಿ ಬರಬೇಕಾಗಿ ರಾಜ್ಯದ ಮುಖಂಡರಿಗೆ ಮನವಿ ಮಾಡುತ್ತೇನೆ ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡಿದರು.

ನಾನು ಸಿದ್ದರಾಮಯ್ಯ ಹಾಗೂ ಸುರ್ಜೇವಾಲ ಅವರೊಂದಿಗೆ ಕ್ಯಾಬಿನೆಟ್ ಬಗ್ಗೆ ಚರ್ಚೆ ನಡೆಸಲು ದೆಹಲಿಗೆ ಹೋಗುತ್ತಿದ್ದೇವೆ. ಕಾಂಗ್ರೆಸ್ ಕೊಟ್ಟ ಗ್ಯಾರಂಟಿಯನ್ನು ಜಾರಿ ಮಾಡುವ ಮೂಲಕ ನಾವು ಮಾತು ಈಡೇರಿಸುತ್ತೇವೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯನವರು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ. ಮನೆಯೊಡತಿಗೆ ಹಣ ನೀಡುವ ಭರವಸೆ ಪ್ರಿಯಾಂಕಾ ಗಾಂಧಿ ನೀಡಿದ್ದಾರೆ. ನಾನು ಹಾಗೂ ಸಿದ್ದರಾಮಯ್ಯ ಗೃಹಜೋತಿ ಬಗ್ಗೆ ಭರವಸೆ ನೀಡಿದ್ದೇವೆ. ಬಸ್ ಪಾಸ್ ಬಗ್ಗೆ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಇವೆಲ್ಲವೂ ಕಾಂಗ್ರೆಸ್ ಪಕ್ಷದ ಒಮ್ಮತದ ಗ್ಯಾರಂಟಿ. ಇವೆಲ್ಲವನ್ನೂ ಈಡೇರಿಸುತ್ತೇವೆ ಎಂದರು.

Related Posts

Scroll to Top