ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ..!

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಸಹಿತ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ..

ಕರಾವಳಿಯಲ್ಲಿರುವ ಪ್ರವಾಸಿಗರು, ಮೀನುಗಾರರು ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಗಂಟೆಗೆ 45 ಕಿ.ಮೀ. ನಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Scroll to Top