ಬೆಂಗಳೂರು, ಜೂ 08: ಗ್ಯಾರಂಟಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಷರತ್ತು ಹಾಕಿ ಜನರಿಗೆ ಮೋಸ ಮಾಡಿರುವುದಾಗಿ ಆರೋಪಿಸಿದ ಬಿಜೆಪಿ, ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ.
ಜನತೆಗೆ ಉಚಿತ ಆಮಿಷ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ತೆರಿಗೆ ಹಣ ಖರ್ಚು ಮಾಡಿ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸರಿಯಾಗಿ ತಲುಪಿಸದ ಕಾರಣ ಅವುಗಳನ್ನು ರದ್ದುಗೊಳಿಸಬೇಕು. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಸಿಎಂಸಿದ್ದರಾಮಯ್ಯ, ಡಿಸಿಎಂ ಡಿ ಕೆಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿರುವುದಾಗಿ ಮೂಲಗಳು ತಿಳಿಸಿವೆ.
ಗ್ಯಾರಂಟಿ ಘೋಷಣೆ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದ್ರೆ ಈಗ ಕಂಡಿಷನ್ ಹಾಕಿದ್ದು, ಹೀಗಾಗಿ ಇಡೀ ಚುನಾವಣಾ ಪ್ರಕ್ರಿಯೆಯನ್ನೇ ಸ್ಥಗಿತಗೊಳಿಸಿ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ತಿಳಿದುಬಂದಿದೆ.