ಅಲೋಕ್ ಕುಮಾರ್ ಸೇರಿ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.

ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.

You cannot copy content from Baravanige News

Scroll to Top