ಗೃಹಲಕ್ಷ್ಮಿ ಯೋಜನೆಯ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ..?

ಬೆಂಗಳೂರು, ಜೂ 08: ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ಎರಡನೇ ಗ್ಯಾರಂಟಿಯಾಗಿರುವ ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಿಡುಗಡೆ ಮಾಡಿದೆ.

ಸಿಎಂ, ಡಿಸಿಎಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಇನ್ನು ಅರ್ಜಿಯಲ್ಲಿ ಮನೆಯ ಯಜಮಾನಿ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.

ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ನಾನು ಮತ್ತು ನನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಸಹ ಮಾಡಬೇಕಾಗಿದೆ. ಅರ್ಜಿದಾದರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಸಲ್ಲಿಸಬೇಕಾಗಿದೆ.ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

You cannot copy content from Baravanige News

Scroll to Top