ನಾಗದೇವತೆ ಸಿನಿಮಾ ಖ್ಯಾತಿಯ ನಟ ಕಜನ್ ಖಾನ್ ಹೃದಯಾಘಾತದಿಂದ ನಿಧನ

ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.

ಕಜಾನ್​ ಖಾನ್​, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ ಎನ್. ಎಂ ಬಾದುಷಾ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

​ಕಜಾನ್​ ಖಾನ್​ ಅವರು ಪ್ರಧಾನವಾಗಿ ಖಳನಟನ ಪಾತ್ರಗಳಲ್ಲೇ ನಟಿಸುತ್ತಿದ್ದರು. 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್​ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು.

You cannot copy content from Baravanige News

Scroll to Top