ಸಿಇಟಿ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2023-24ನೇ ಸಾಲಿನ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ (KCET Results 2022) ಪ್ರಕಟವಾಗಿದೆ.

ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ಕೋರ್ಸ್ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ- 2,06,340, ನರ್ಸಿಂಗ್ ಕೋರ್ಸಿಗೆ – 1,66,808 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 20 ಹಾಗೂ 21ರಂದು ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ, ಯೋಗ, ನ್ಯಾಚುರೋಪತಿ, ಡಿ ಫಾರ್ಮ ಕೋರ್ಸ್ ಹಾಗೂ ಬಿಎಸ್ಸಿ ನರ್ಸಿಂಗ್ಗೆ ಪ್ರವೇಶ ಪರೀಕ್ಷೆ ನಡೆಸಿತ್ತು. ಒಟ್ಟು 2,44,345 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

karresults.nic.in ಹಾಗೂ cetonline.karnataka.gov.in ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Scroll to Top