‘ಡಿಸೆಂಬರ್ ಒಳಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ’- ಭವಿಷ್ಯ ನುಡಿದ ಕಟೀಲ್..!!!

ಬೆಂಗಳೂರು: ಡಿಸೆಂಬರ್ ಒಳಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪತನವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಈ ಸಂಬಂಧ ಮಾತಾಡಿದ ಕಟೀಲ್, ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹೀಗಾಗಿ ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ಸಿಗೋದು ಡೌಟ್. ಹೀಗೆ ಕಾಂಗ್ರೆಸ್ ನಾಯಕರು ಕಚ್ಚಾಟ ನಡೆಸಿದರೆ ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಸರ್ಕಾರ ಬೀಳಲಿದೆ ಎಂದರು.

ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಕೇಂದ್ರದ 5 ಕೆಜಿಗೆ ಇನ್ನೈದು ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದಾರೆ. ಹಾಗಾದ್ರೆ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ 10 ಕೆಜಿ ನೀಡಲಿದೆ ಎಂದು ಹೇಳಿದ್ದು ಸುಳ್ಳು ಎಂದು ವ್ಯಂಗ್ಯವಾಡಿದರು.

ಗೃಹಲಕ್ಷ್ಮೀ ಯೋಜನೆ ಹೆಸರಲ್ಲಿ ಕಾಂಗ್ರೆಸ್ ಜನರಿಗೆ ಮೋಸ ಮಾಡುತ್ತಿದೆ. ಸ್ಕೀಮ್ ಜಾರಿಗೆ ಮುನ್ನವೇ ವಿದ್ಯುತ್ ಬಿಲ್ ಏರಿಕೆ ಮಾಡಲಾಗಿದೆ. ಇದರಿಂದ ಲೋಡ್ ಶೆಡ್ಡಿಂಗ್ ರೀತಿಯಲ್ಲೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಕರೆಂಟ್ ಬಿಲ್ ಏರಿಕೆ ಖಂಡಿಸಿ ಕೈಗಾರಿಕಾ ವಾಣಿಜ್ಯ ಮಂಡಳಿ ಬಂದ್ಗೆ ಕರೆ ನೀಡಿದೆ. ನಾವು ಕೈಗಾರಿಕಾ ವಾಣಿಜ್ಯ ಮಂಡಳಿ ಬಂದ್ ಕರೆಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

You cannot copy content from Baravanige News

Scroll to Top