ಕೇಂದ್ರ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ..!!

ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಗೆ ಮುನ್ನ ನೀಡಿದ್ದ ಭರವಸೆಯಂತೆ ಅನ್ನಭಾಗ್ಯ ಯೋಜನೆ ಜಾರಿಗೆ ತರಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಆದರೀಗ, ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ಸಮಸ್ಯೆ ಎದುರಾಗಿದೆ. ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದ್ದು, ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಸಲು ಸರ್ಕಾರ ಮುಂದಾಗಿದೆ. ಈ ಮಧ್ಯೆ ದೆಹಲಿಯಲ್ಲಿರೋ ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ರನ್ನು ಭೇಟಿ ಮಾಡಿದ್ದಾರೆ.

ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಿ ಎಂದು ಮನವಿ ಮಾಡಿದ್ದಾರೆ.

ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆ ನೀಡಿದ್ದೇವೆ. ಇದಕ್ಕೀಗ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಬೇಕಿದೆ. ನಿಗದಿತ ದರಕ್ಕೆ ನಾವು ಕೇಂದ್ರದಿಂದ ಅಕ್ಕಿ ಖರೀದಿ ಮಾಡುತ್ತೇವೆ ಎಂದು ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ ಗೋಹತ್ಯೆ ಮಸೂದೆ, ಎಪಿಎಂಸಿ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ ರದ್ದು ಮಾಡಿದ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಹಾಗೆಯೇ ಈ ಕಾಯ್ದೆಗಳ ಹಿಂಪಡೆಯಲು ರಾಷ್ಟ್ರಪತಿಗಳ ಒಪ್ಪಿಗೆ ಅಗತ್ಯವಿದೆ.

You cannot copy content from Baravanige News

Scroll to Top