ಅಮೇರಿಕಾದಲ್ಲಿ ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅಮೇರಿಕಾ : ಕಾಂತಾರ ಸಿನೆಮಾದ ಭರ್ಜರಿ ಯಶಸ್ಸಿನ ಬಳಿಕ ಇದೀಗ ಯುನಿವರ್ಸಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿರುವ ಕನ್ನಡಿಗರು ವಿಶ್ವ ಶ್ರೇಷ್ಠ ಕನ್ನಡಿಗ 2023 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

ಅಮೇರಿಕದ ವಾಷಿಂಗ್ಟನ್ನ ಸಿಯಾಟಲ್ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ನೀಡಲಾಗಿದೆ ಈ ವೇಳೆ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.


ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

Scroll to Top