ಉಡುಪಿ ಜಿಲ್ಲೆಯಲ್ಲಿ ಕಳೆದರೆಡು ದಿನಗಳಿಂದ ಮಳೆ ಸುರಿಯುತ್ತಾ ಇದ್ದು, ಇಂದು ಕೂಡ ಮಳೆ ಮತ್ತೆ ಮುಂದುವರಿದಿದೆ.
ಜಿಲ್ಲೆಯ ಸ್ವರ್ಣಾ ನದಿ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ಬಂದಿದೆ.
ಇನ್ನು ಸ್ವರ್ಣ ನದಿಗೆ ಹಿರಿಯಡ್ಕದಲ್ಲಿ ಅಡ್ಡವಾಗಿ ನಿರ್ಮಿಸಿರುವ ಉಡುಪಿ ನಗರದ ಜೀವನಾಡಿಯಾಗಿರುವ ಬಜೆ ಡ್ಯಾಮ್ ನಲ್ಲಿ ನೀರು ಭರ್ತಿಯಾಗಿದ್ದು ಮಿಗತೆ ನೀರನ್ನು ಹೊರಕ್ಕೆ ಬಿಡಲಾಗಿದೆ.
ಜಿಲ್ಲೆಯಲ್ಲಿ ಕೆಲವು ಕಡೆ ಭಾರೀ ಮಳೆ ಸುರಿಯುತ್ತಾ ಇರುವ ಕಾರಣ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಲಭ್ಯವಾಗಿದೆ.
ಸಮುದ್ರ ಹಾಗೂ ನದಿ ಪಾತ್ರದ ನಿವಾಸಿಗಳು ಮಳೆಯ ಕುರಿತು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮಾಧ್ಯಮಗಳ ಮೂಲಕ ಮನವಿ ಮಾಡಿದೆ.
ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಕೆಲವು ನಿರ್ದೇಶನಗಳನ್ನು ನೀಡಿದ್ದು, ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
ಮಳೆಗಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮದ್ಯಾಹ್ನ ಹಾಗೂ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ವವನ್ನು ಸರಿದೂಗಿಸುವಂತೆ ತಿಳಿಸಿದೆ.
ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು.
ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕು.
ಕಠಿಣವಾದ ತೋಡು, ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುಂತೆ ಒಟ್ಟು ಏಳು ಅಂಶಗಳ ಸುತ್ತೋಲೆಯನ್ನು ಜಿಲ್ಲಾಡಳಿತ ಹೊರಡಿಸಿದೆ.
ಜಿಲ್ಲೆಯಲ್ಲಿ ಇನ್ನೂ ಕೆಲವು ದಿನಗಳ ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.