ಉಡುಪಿ, ಜು.5: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟ ಬುಧವಾರ ಕೂಡ ಮುಂದುವರಿದಿದ್ದು, ಮುಂಜಾಗೃತ ಕ್ರಮವಾಗಿ ಜುಲೈ 6 (ಗುರುವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್. ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.