ಟಿಪ್ಪರ್ ಲಾರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಚಾಲಕ : ವೀಡಿಯೋ ವೈರಲ್

ಪಡುಬಿದ್ರಿ : ಟಿಪ್ಪರ್‌‌ನ ಡಂಪರ್‌‌ಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಟಿಪ್ಪರ್ ಎಳೆದೊಯ್ದಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದ್ದು, ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗುತ್ತಿದ್ದಂತೆ ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದು, ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ವೇಗವಾಗಿ ಚಾಲಕ ಟಿಪ್ಪರ್ ಓಡಿಸಿದ್ದಾನೆ.

ಇನ್ನು ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿರಲಿಲ್ಲ. ಬಳಿಕ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ಸಾರ್ವಜನಿಕರು ನಿಲ್ಲಿಸಿದ್ದು, ಪಡುಬಿದ್ರಿ ಪೊಲೀಸರು ಟಿಪ್ಪರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಗಳನ್ನು ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಇನ್ನು ಗಾಯಾಳುಗಳಿಂದ ಮಾಹಿತಿ ಪಡೆದಿರುವ ಪೊಲೀಸರು ಕೇಸು ದಾಖಲಿಸಿದ್ದಾರೆ.

You cannot copy content from Baravanige News

Scroll to Top