ನವದೆಹಲಿ, ಜು 20: ಚಂದ್ರಯಾನ-3 ಬಾಹ್ಯಾಕಾಶ ನೌಕೆಯ ಕಕ್ಷೆ ಎತ್ತರಿಸುವ 4ನೇ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಹೇಳಿದೆ.
ಈ ಕುರಿತು ಮಾಹಿತಿ ನೀಡಿರುವ ಇಸ್ರೋ, ಜುಲೈ 25 ರಂದು ಮಧ್ಯಾಹ್ನ 2 ರಿಂದ 3 ಗಂಟೆಯವರೆಗೆ ಮುಂದಿನ ಕಕ್ಷೆ ಎತ್ತರಿಸುವ ಪ್ರಕ್ರಿಯೆಯನ್ನು ಯೋಜಿಸಲಾಗಿದ್ದು, ಚಂದ್ರಯಾನ-3 ಅನ್ನು ಚಂದ್ರನ ಹತ್ತಿರ ಒಂದು ಹೆಜ್ಜೆ ಮುಂದಿಡುವ ಮೂಲಕ ಭಾರತವು 2023 ರ ಅಂತಾರಾಷ್ಟ್ರೀಯ ಚಂದ್ರ ದಿನವನ್ನು ಆಚರಿಸುತ್ತದೆ ಎಂದಿದೆ.
ಇನ್ನು ಚಂದ್ರಯಾನ-3 ಮಿಷನ್ ಅನ್ನು ಜುಲೈ 14 ರಂದು ಪ್ರಾರಂಭಿಸಲಾಗಿದ್ದು ಬಾಹ್ಯಾಕಾಶ ನೌಕೆ ಚಂದ್ರನ ಹಾದಿಯಲ್ಲಿದೆ. ಕೆಲವೇ ದಿನಗಳಲ್ಲಿ ಅದು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯುತ್ತದೆ ಎಂದು ತಿಳಿಸಿದೆ.