ಮಣಿಪಾಲ : ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ : ಇಬ್ಬರ ಬಂಧನ

ಮಣಿಪಾಲ : ವೇಶ್ಯಾವಾಟಿಕೆ ನಡೆಯುತ್ತಿರುವ ಮನೆಗೆ ಮಣಿಪಾಲ ಠಾಣಾ ಇನ್ಸ್ಪೆಕ್ಟರ್‌ಗೆ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಮುಖ ಆರೋಪಿ ವೇಶ್ಯಾವಾಟಿಕೆಯ ಪಿಂಪ್ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.



ಕಳೆದ ರಾತ್ರಿ ಠಾಣಾ ಇನ್ಸ್ಪೆಕ್ಟರ್ ದೇವರಾಜ್ ಟಿ.ವಿ. ಅವರಿಗೆ ಬಂದ ಖಚಿತ ಮಾಹಿತಿಯಂತೆ ಮಣಿಪಾಲದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಗೆ ದಾಳಿ ನಡೆಸಿದ್ದಾರೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಕೊಠಡಿಗಳನ್ನು ಒದಗಿಸಿದ ಸಲಾಮತ್‌ ಹಾಗೂ ಚಂದ್ರ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಖಾಲಿದ್ ಎಂಬಾತ ಪರಾರಿಯಾಗಿದ್ದಾನೆ.ವಶಕ್ಕೆ ಪಡೆದವರಲ್ಲಿ 4 ಮೊಬೈಲ್‌ ಪೋನ್‌, 10000 ರೂ. ನಗದು, ಕಾಂಡಮ್‌ಗಳು, ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

You cannot copy content from Baravanige News

Scroll to Top