ಉಡುಪಿ: ನಿರಂತರ ಮಳೆ ಹಿನ್ನೆಲೆ; ಜಿಲ್ಲೆಯಾದ್ಯಂತ ನಾಳೆ (ಜು.24) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜು 23: ಜಿಲ್ಲೆಯಲ್ಲಿ ನಿರಂತರ ಮಳೆ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಪಿಯು ಕಾಲೇಜುಗಳಿಗೆ ಜುಲೈ 24ರ ಸೋಮವಾರ(ನಾಳೆ) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.


ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರಿನ ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯು ವರದಿ ಮಾಡಿದೆ.

ಈ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Scroll to Top