ಮಂಗಳೂರು, ಜು 24: ಭಾರಿ ಮಳೆ ಹಿನ್ನಲೆ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.25ರಂದು ರಜೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.25ರ ಮಂಗಳವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.