ಮಂಗಳೂರು ವಿವಿಯ ಜು. 25ರ ಎಲ್ಲಾ ಪರೀಕ್ಷೆ ಮುಂದೂಡಿಕೆ

ಮಂಗಳೂರು, ಜು.24: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಂಗಳವಾರ (ಜುಲೈ 25) ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಕಾರಣ ಮಂಗಳೂರು ವಿಶ್ವ ವಿದ್ಯಾಲಯದ ನಿಗದಿಯಾಗಿದ್ದ (ಜುಲೈ 25) ಪರೀಕ್ಷೆಗಳನ್ನು ಮುಂದೂಡಲಾಗಿದೆ.

25 ರಂದು ನಡೆಯಬೇಕಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಿ ಎಲ್ಲಾ ಸಂಯೋಜಿತ ಕಾಲೇಜುಗಳಿಗೆ ಶೀಘ್ರದಲ್ಲಿ ತಿಳಿಸಲಾಗುವುದು. ಈ ಹಿಂದೆ ಪ್ರಕಟಿಸಿದ ಉಳಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ವಿವಿ ಸೋಮವಾರ ಪ್ರಕಟಣೆ ಹೊರಡಿಸಿದೆ.

ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಅಂಗನವಾಡಿಯಿಂದ ಪದವಿ ಕಾಲೇಜುಗಳ ವರೆಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

You cannot copy content from Baravanige News

Scroll to Top