ಮೊಬೈಲ್ ಚಿತ್ರೀಕರಣ ಪ್ರಕರಣ : ‘ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇವೆ..’, ಕಾಲೇಜು ಆಡಳಿತ ಮಂಡಳಿಯಿಂದ ಪತ್ರಿಕಾಗೋಷ್ಠಿ

ಉಡುಪಿ : ಕಾಲೇಜೊಂದರಲ್ಲಿ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.


ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

You cannot copy content from Baravanige News

Scroll to Top