ಉಡುಪಿ, ಜು.26: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ಸಮಸ್ಯೆ ವಿಚಾರಣೆಯ ಕುರಿತು ಬುಧವಾರ ಸಂಜೆ ಉಡುಪಿಗೆ ಆಗಮಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಮೆಡಿಕಲ್ ಸ್ಟೂಡೆಂಟ್ಸ್ ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ. ಎಲ್ಲರ ಜೊತೆ ಮಾತನಾಡಿದ ನಂತರ ನಾನು ಮಾಧ್ಯಮಗಳಿಗೆ ವಿವರಿಸುತ್ತೇನೆ” ಎಂದರು.
”ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಆರಿತುಕೊಳ್ಳಬೇಕಾಗಿದೆ. ಒಟ್ಟು ಎರಡು ದಿನ ನಾನು ಉಡುಪಿಯಲ್ಲಿ ಇರುತ್ತೇನೆ. ಕಾಲೇಜಿಗೆ ಭೇಟಿ ಕೊಡುತ್ತೇನೆ” ಎಂದು ಹೇಳಿದರು.