ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅಕ್ಕ ಸ್ಪಂದನ ಅವರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26 ರಲ್ಲಿ ಪ್ರೀತಿಸಿ ಮದುವೆಯಾಗಿದ್ದರು. ಇವರ 16ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನಗಳು ಬಾಕಿ ಇರುವಂತೆ ಈ ದುರಂತ ನಡೆದಿದೆ.

ಅಪ್ಪು ನಿಧನದ ಶಾಕ್‌ನಿಂದ ಹೊರ ಬಂದಾಗಲೇ ಮತ್ತೊಂದು ಆಘಾತಕಾರಿ ವಿಚಾರ ಕುಟುಂಬಕ್ಕೆ ಶಾಕ್‌ ನೀಡಿದೆ. ಲೋ ಬಿಪಿ ಮತ್ತು ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ ಬಿಪಿ ಹಾಗು ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಪಂದನಾ ಬೆಳ್ತಂಗಡಿಯ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ರವರ ಸಹೋದರಿ.

Scroll to Top