ನಗರ ಸಭೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ

ಉಡುಪಿ : ನಗರ ಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ರವರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.

ನಗರಸಭೆ ವ್ಯಾಪ್ತಿ ಸಮರ್ಪಕ ಕುಡಿಯುವ ನೀರಿನ ಪೂರೈಕೆ ಮತ್ತು ಬೀದಿ ದೀಪ ನಿರ್ವಹಣೆ ಬಗ್ಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.



ಸರಳಬೆಟ್ಟಿನಲ್ಲಿ ನಿರ್ಮಾಣ ಹಂತದಲ್ಲಿರುವ ವಸತಿ ಯೋಜನೆಯ ಸಮಸ್ಯೆಗಳ ಬಗ್ಗೆ, ನಗರದ ಸ್ವಚ್ಚತೆ ಹಾಗೂ ತ್ಯಾಜ್ಯ ವಿಲೇವಾರಿ, ಮಣಿಪಾಲದಲ್ಲಿ ವ್ಯವಸ್ಥಿತ ರೀತಿಯಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಮುಂಬರುವ ಪರ್ಯಾಯ ಮಹೋತ್ಸವದ ಅಂಗವಾಗಿ ನಗರದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಅನುದಾನ ಮೀಸಲು, ಉಡುಪಿ ಭುಜಂಗ ಪಾರ್ಕ್ ಸಮರ್ಪಕ ನಿರ್ವಹಣೆ ಹಾಗೂ ಕ್ರೀಡಾ ಚಟುವಟಿಕೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಉಡುಪಿ ನಗರದಾದ್ಯಂತ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಾಮರ್ಶಿಸಿ ಅವೈಜ್ಞಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ರಾಫಿಕ್ ಸಿಗ್ನಲ್ ತೆರವಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಮುಂದಿನ ದಿನದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ, ಪೊಲೀಸ್ ಇಲಾಖೆ ಸಹಿತ ಸಂಬಂಧಿತ ಇಲಾಖೆಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ನಗರಸಭೆ ನಿಕಟ ಪೂರ್ವ ಅಧ್ಯಕ್ಷರಾದ ಸುಮಿತ್ರ ನಾಯಕ್, ಪೌರಾಯುಕ್ತ ರಾಯಪ್ಪ, ಏಇಇ ಯಶವಂತ ಪ್ರಭು, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಬಾಲಕೃಷ್ಣ ಶೆಟ್ಟಿ, ಶ್ರೀಶ ಕೊಡವೂರು, ಕಲ್ಪನಾ ಸುಧಾಮ, ಸಂತೋಷ್ ಜತ್ತನ್, ಕೃಷ್ಣ ಕೊಡಂಚ ಹಾಗೂ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

You cannot copy content from Baravanige News

Scroll to Top